Published On: Thu, Jun 28th, 2018

ದಿವ್ಯಜ್ಯೋತಿ ಪ್ರಶಸ್ತಿ ಪ್ರದಾನ ಸಮಾರಂಭ

Share This
Tags
ದಿವ್ಯಜ್ಯೋತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಹನುಮಂತನಗರದ ಕೆ.ಹೆಚ್.ಕಲಾಸೌಧದಲ್ಲಿ ಜೂನ್ 26ರಂದು ಸಂಜೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ತಾರಾ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಈ ಸಾಲಿನ ದಿವ್ಯಜ್ಯೋತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಇದೇ ವೇಳೆ ಹಿರಿಯ ನಟರಾದ ಡಿಂಗ್ರಿ ನಾಗರಾಜ್  ಹಾಗೂ ಹೊನ್ನವಳ್ಳಿ ಕೃಷ್ಣ ಅವರನ್ನು ಸನ್ಮಾನಿಸಲಾಯಿತು.
ದಿವ್ಯಜ್ಯೋತಿ ಸೇವಾ ಟ್ರಸ್ಟ್ನ ಸ್ಥಾಪಿತ ಅಧ್ಯಕ್ಷರಾದ ಡಾ. ವೀಣಾ ಅಶೋಕ್, ಅಧ್ಯಕ್ಷರಾದ ಡಾ. ಜ್ಯೋತಿ ಜೆ.ಯು ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಜೊತೆಗೆ ಪ್ರತಿಭಾನ್ವಿತ ಕಡುಬಡ ವಿದ್ಯಾರ್ಥಿಗಳಿಗೆ ಹಾಗೂ ವಿಕಲಚೇತನರಿಗೆ ಉಚಿತವಾಗಿ ಲ್ಯಾಪ್  ಟಾಪ್ ಸಹ ವಿತರಣೆ ಮಾಡಲಾಯಿತು.
ಕಣ್ವ ಶ್ರೀ ಸಾಯಿ ಆಸ್ಪತ್ರೆಯವರಿಂದ ಉಚಿತ ಆರೋಗ್ಯ ತಪಾಸಣೆಯನ್ನು  ಮಾಡಲಾಯಿತು.
ಕಾರ್ಯಕ್ರಮದ ಯಶಸ್ಸಿನಲ್ಲಿ  ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸದಾ ಸಮಾಜಸೇವೆಯಲ್ಲಿ ತೊಡಗಿರುವ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಪ್ರತಿ ವರ್ಷದಂತೆ ಈ ಬಾರಿಯು ಕೂಡ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜಿಸಿದ್ದರು.

About the Author

-

Powered By Indic IME